Uncategorized

ಶಾಸಕರ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಕೇಸ್; ಬರೋಬ್ಬರಿ 7.62 ಕೋಟಿ ನಗದು ಹಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿ ಅಂತ್ಯವಾಗಿದ್ದು, ಒಟ್ಟು 7.62 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದು ಐವರನ್ನು ಬಂಧಿಸಿದ್ದಾರೆ.

ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್, ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೊಲಸ್, ಗಂಗಾಧರ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆಯಿಂದ ಇಂದು ಬೆಳಿಗ್ಗೆ 4 ಗಂಟೆಯವರೆಗೂ ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಪ್ರಶಾಂತ್ ಕಚೇರಿಯಲ್ಲಿ 1.62 ಕೋಟಿ ರೂ ಹಾಗೂ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ನಗದು ಸೇರಿ ಒಟ್ಟು 7.62 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ.

ಇನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೂ ಲೋಕಾಯುಕ್ತ ದಾಳಿ ಭೀತಿ ಎದುರಾಗಿದ್ದು, ದಾವಣಗೆರೆ ನಿವಾಸದ ಮೇಲೆ ದಾಳಿ ನಡೆಸುವ ಸಾಧ್ಯತೆ ದಟ್ಟವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button