*BREAKING: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೂಳಪ್ಪ ಎಂಬುವವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ದೂರು ಹಿನ್ನೆಲೆಯಲ್ಲಿ ಈ ದಾಳಿ ಮಡೆದಿದೆ. ಲೋಕಾಯುಕ್ತ ಡಿವೈ ಎಸ್ ಪಿ ಹನುಮಂತ ರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಉಡುಪಿ ಜಿಲ್ಲೆಯ ಆರ್ ಟಿಒ ಅಧಿಕಾರಿ ಲಕ್ಷ್ಮೀ ನಾರಾಯಣ ನಾಯ್ಕ್ ಅವರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಕ್ಷ್ಮೀ ನಾರಾಯಣ ಅವರ ಸಂಬಂಧಿಕರ ಮನೆ ಉತ್ತರ ಕನ್ನಡ ಜಿಲ್ಲೆಯ, ಕುಮಟಾ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಹತ್ತು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಚಿತ್ರದುರ್ಗದ ಕೃಷಿ ಇಲಾಖೆ ಎಂಡಿ ಚಂದ್ರಕಾಂತ್ ಅವರ ನಿವಾಸ, ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ. ಹಾಸನ ಡಿಹೆಚ್ ಒ ಜ್ಯೋತಿಮೇರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.