
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ತಟ್ಟಿದ್ದಾರೆ.
ರಾಯಚೂರು, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ ನಾಲ್ಕು ಕಡೆಗಳಲ್ಲಿ ದಾಳಿ ನಡೆದಿದೆ.
ಬಾಗಲಕೋಟೆಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಸ್.ಕಾಂಬಳೆ ಅವರ ಮನೆ ಮೇಲೆ ಹಾಗೂ ನರಗುಂದದ ಅವರ ನಿವಾಸದ ಮೇಲೂ ದಾಳಿ ನಡೆದಿದೆ.
ವಿಜಯಪುರ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಖೆ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯಚೂರಿನಲ್ಲಿ ನಿವೃತ್ತ ಅಧಿಕಾರಿ ವಿಜಯಲಕ್ಷ್ಮೀ ಎಂಬುವವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



