Karnataka NewsLatest

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್*

ಪ್ರಗತಿವಾಹಿನಿ ಸುದ್ದಿ: 10 ಲಕ್ಷ ರೂಪಾಯಿ ಲಂಚಕ್ಕೆ ಕೈಯೊಡ್ದಿದಾಗಲೇ ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಬೆಂಗಳೂರಿನ ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರರ ಕಡತ ಫಾರ್ವವರ್ಡ್ ಮಾಡಿಕೊಡಲು ಹತ್ತು ಲಕ್ಷ ರೂಪಾಯಿ ಲಂಚಕ್ಕೆ ಬೇದಿಕೆ ಇಟ್ಟಿದ್ದರು.

ಇಂದು 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣದ ಸಮೇತವಾಗಿ ಕಾರ್ಯಪಾಲಕ ಇಂಜಿನಿಯರ್ ನನ್ನು ವಶಕ್ಕೆ ಪಡೆದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button