Kannada NewsKarnataka News

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ*

ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಕುಮಾರ್ ನಾಯ್ಕ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ. ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ. ಇ-ಸ್ವತ್ತು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ವಿನೋದ್ ಎಂಬುವವರಿಂದ 3,000 ರೂಪಾಯಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕುಮಾರ್ ನಾಯ್ಕ್ ಅವರನ್ನು ಬಂಧಿಸಿದ್ದಾರೆ.

Home add -Advt


Related Articles

Back to top button