Kannada NewsKarnataka NewsLatestPolitics

*ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕೋರ್ಟ್ ಸೂಚನೆ ಮೇರೆಗೆ ಶಾಸಕ ರಾಜೇಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಇನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದದಲ್ಲಿ ಶಾಸಕರ ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಿಜೆಪಿ ಮುಖಂಡ ದಿನೇಶ್ ಹೊಸೂರು ರಾಜೇಗೌಡ ವಿರುದ್ಧ ದೂರು ದಾಖಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button