Kannada NewsKarnataka NewsLatest
*ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ 5, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಸ್ಕಾಂ ಇಂಜಿನಿಯರ್ ಆರ್.ಹೆಚ್ ಅರ್ಜುನ್ ಅವರ ಮನೆ ಹಾಗೂ ಕಚೇರಿಗಳ ಮೇಲೂ ದಾಳಿ ನಡೆದಿದೆ ದಾವಣಗೆರೆಯ ಬೆಸ್ಕಾಂ ನಲ್ಲಿ ಸಿವಿಲ್ ವಿಭಾಗದಲ್ಲಿ ಅರ್ಜುನ್ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಆರೋಪ ಕೇಳಿಬಂದಿದೆ. ಅರ್ಜಿನ್ ಅವರ ದಾವಣಗೆರೆ ಕಚೇರಿ, ಮನೆ ಹಾಗೂ ಶಿವಮೊಗ್ಗದ ಅವರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.




