ಬೆಳ್ಳಂಬೆಳಿಗ್ಗೆ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟ ಅಧಿಕಾರಿಗಳ ಮನೆ ಕದ ತಟ್ಟಿದ್ದಾರೆ. ಬೆಂಗಳೂರು, ಮೈಸೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿ ಪಾಲಿಕೆ ಉಪ ವಿಭಾಗಾಧಿಕಾರಿ ವೆಂಕಟರಾಮ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಕೌಶಲಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಸ್ವಾಮಿ ಅವರ ಸಾತಗಳ್ಳಿ ಜೆ.ಪಿ.ನಗರದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. Home … Continue reading ಬೆಳ್ಳಂಬೆಳಿಗ್ಗೆ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ