Kannada NewsKarnataka NewsLatest

*ಬೆಳ್ಳಂ ಬೆಳಿಗ್ಗೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ರೇಡ್; ಬೆಳಗಾವಿ ಎಇಇ ನಿವಾಸದ ಮೇಲೂ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

Home add -Advt

ರಾಜ್ಯದ ಹಲವೆಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

90 ಅಧಿಕಾರಿಗಳ ಮನೆ, ನಿವಾಸ ಸೇರಿದಂತೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದ್ದು, ಪಂಚಾಯತ್ ರಾಜ್ ಇಲಾಖೆಯ ಎಇಇ ಎಂ.ಎಸ್.ಬಿರಾದಾರ ಮನೆ ಮೇಲೆ ರೇಡ್ ಮಾಡಿದ್ದಾರೆ.

ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟ್ ಮೆಂಟ್ ನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ್ದು, ಲೋಕಾಯುಕ್ತ ಎಸ್ ಪಿ ಹನುಮಂತರಾವ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ.

ಗುಲಬರ್ಗಾದಲ್ಲಿ ಟೌನ್ ಪ್ಲ್ಯಾನಿಂಗ್ ಅಧಿಕಾರಿಯಾಗಿರುವ ಅಣ್ಣಾಸಾಹೇಬ ಕಾಂಬಳೆ ಅವರ ಬೆಳಗಾವಿ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

Related Articles

Back to top button