ಲೋಕಾಯುಕ್ತ ದಾಳಿ ಕೇಸ್; ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾವಣೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೂಡ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ 40 ಲಕ್ಷ ಲಂಚ ಪಡೆಯುತ್ತಿದ್ದಾಗ ನಿನ್ನೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದರು. ಪ್ರಶಾಂತ್ ಕಚೇರಿ, ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 8 ಕೋಟಿ ನಗದು ಹಣ ವಶಕ್ಕೆ ಪಡೆದಿದ್ದರು. ಪ್ರಕರಣ ಸಂಬಂಧ ಪ್ರಶಾಂತ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ, ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸೂಚಿಸಿದು, ಎಫ್ ಐಆರ್ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ತಿಳಿಸಿದೆ.
ಅಲ್ಲದೇ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ವರ್ಗಾವಣೆ ಮಾಡಿದೆ. ಬಂಧನ ಭೀತಿಯಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ