ಪ್ರಕರಣ ಮುಚ್ಚಿ ಹಾಕುವ ಪ್ರಶ್ನೆ ಇಲ್ಲ: ಪ್ರಹ್ಲಾದ್ ಜೋಶಿ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬಳ್ಳಾರಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ತನಿಖೆಯನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಕಾರು ಅಪಘಾತ ಪ್ರಕರಣದಲ್ಲಿ ಬಿಜೆಪಿ ಸಚಿವರ ಪುತ್ರನ ಹೆಸರು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದರು. ತನಿಖೆಯನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ. ಯಾವ ತನಿಖೆ ಮಾಡುತ್ತಾರೋ ಅದನ್ನು ಸಿಎಂ ಮಾಡಲಿ. ಕಾರಿನಲ್ಲಿ ಅವರಿದ್ದರು ಇವರಿದ್ದರು ಎಂಬ ಉಹಾಪೋಹದ ಮೇಲೆ ಹೇಳಲು ಸಾಧ್ಯವಿಲ್ಲ. ಅಪಘಾತ ಅಪಘಾತವೇ, ಅವರೆಂತಹ ಪ್ರಭಾವಿ ಇದ್ದರೂ ಪ್ರಕರಣ ಮುಚ್ಚಿ ಹಾಕುವ ಪ್ರಶ್ನೆ ಇಲ್ಲ ಎಂದರು.

Home add -Advt

ಎಫ್‌ ಐಆರ್‌ನಲ್ಲಿ ಹೆಸರು ತೆಗೆದು ಹಾಕಿದ್ದರೆ ಆ ಬಗ್ಗೆಯೂ ತನಿಖೆಯಾಗಲಿದೆ.

Related Articles

Back to top button