ಪ್ರಗತಿವಾಹಿನಿ ಸುದ್ದಿ: ಮೂರು ಲಕ್ಷ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಗಲೇ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೊಪ್ಪಳ ನಗರ ಹಾಗೂ ಗ್ರಾಮಾಂತರ ಯೋಜನೆ ಇಲಾಖೆಯ ಅಧಿಕಾರಿ ರಮೇಶ್ ಬಸವನಗೌಡ ಲೋಕಾಯುಕ್ತ ಬಲೆಗೆ ಬಿದ್ದವರು. ಲೇಔಟ್ ಪರವಾನಿಗೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಕುಕನೂರು ಮೂಲದ ರವಿಚಂದ್ರ ಎಂಬುವವರಿಂದ ಮೂರು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಯನ್ನು ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ