
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕ್ರಮವಾಗಿ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ ಆರ್ ಟಿ ಓ ಅಧಿಕಾರಿಗಲಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಆರ್ ಟಿಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಕರ್ನಾಟಕ-ಆಂಧ್ರ ಗಡಿ ಭಾಗದಲ್ಲಿರುವ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ಲೋಕಾಯುಕ್ತ ಎಸ್ ಪಿ ಮನೋಜ್ ನೇತೃತ್ವದಲ್ಲಿ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಲಾಗಿದೆ.
ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಖಾರಿಗಳು ದಾಳಿ ನಡೆಸಿದ್ದು, ಆರ್ ಟಿಒ ಕಚೇರಿಯಲ್ಲಿನ ದಾಖಲೆ, ಹಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ದ್ವಿತೀಯ ಪಿಯು ತಾತ್ಕಾಲಿಕ ವೇಳಾ ಪಟ್ಟಿ
https://pragati.taskdun.com/latest/2nd-puexamtimetable/