Kannada NewsKarnataka NewsLatest

*ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: RTO ಅಧಿಕಾರಿಗಳು ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರ್ ಟಿ ಒ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ನೈಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನೆಲಮಂಗಲ ಆರ್​ಟಿಒ ಕಚೇರಿಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

30,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಆರ್​ಟಿಒ ಕಚೇರಿಯ ಪ್ರೊಬೇಷನರಿ ಇನ್ಸ್​ಪೆಕ್ಟರ್​ಗಳಾದ ದಿನೇಶ್ ಕುಮಾರ್, ಕಿರಣ್ ಮತ್ತು ಖಾಸಗಿ ವ್ಯಕ್ತಿ ರಮೇಶ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಧಿಕಾರಿಗಳು ಗೂಗಲ್ ಪೇ ಮೂಲಕ 2,000, 1,000 ರೂಪಾಯಿ ಹಣವನ್ನು ಲಂಚ ಪಡೆದಿದ್ದರು. ಇಂದು ಖಾಸಗಿ ವ್ಯಕ್ತಿ ರಮೇಶ್ 300 ರೂ. ಲಂಚ ಪಡೆವಾಗ ಲೋಕಾಯುಕ್ತ ಪೊಲೀಸರು ಇವರನ್ನು ಖೆಡ್ಡಾಕೆ ಕೆಡವಿದ್ದಾರೆ. ಓವರ್​ಲೋಡ್ ಟ್ರಕ್ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಹಾರಾಷ್ಟ್ರ ಮೂಲದ ಪ್ರಶಾಂತ್ ದತ್ತಾತ್ರೇಯ ಎಂಬುವವರು ಲೋಕಾಯುಕ್ತಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಎಸ್​ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.


Related Articles

Back to top button