
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ್ ಗ್ರೇಡ್ 2 ತಹಶೀಲ್ದಾರ್ ಶ್ರೀಕಾಂತ್ ಬೆಟಗೇರಿ ಹಾಗೂ ಶಿವಾನಂದ ಹಿರೇಮಠ ಸೇರಿದಂತೆ ಹಲವು ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ.
ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 30 ಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ಮೂಲಕ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅನರ್ಹರಿಗೆ ಸಂಧ್ಯಾಸುರಕ್ಷಾ ಯೋಜನೆ ಮಂಜೂರು ಮಾಡಿದ ಆರೋಪ ಇರುವ ಕಾರಣ ಗೋಕಾಕ ತಹಶಿಲ್ದಾರ್ ಸೇರಿದಂತೆ ವಿವಿಧ ಶಾಖೆಯ ಅಧಿಕಾರಿಗಳ ಕಚೇರಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ