
ಪ್ರಗತಿವಾಹಿನಿ ಸುದ್ದಿ: 3 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ನಗರಸಭೆ ಬಿಜೆಪಿ ಸದಸ್ಯ ಹಾಗೂ ಅಧಿಕಾರಿ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಸಭೆಯ ಹಾಲಿ ಬಿಜೆಪಿ ಸದಸ್ಯ, ಮಾಜಿ ಅಧ್ಯಕ್ಷ ಗಣಪತಿ ನಾಯ್ಕ್ ಹಾಗೂ ನಗರಸಭೆ ಅಧಿಕಾರಿ ಆರ್.ಎಂ.ವರ್ಣೇಕರ್ ಲೋಕಾಯುಕ್ತ ಬಲೆಗೆ ಬಿದ್ದವರು.
ರಮೇಶ್ ಹೆಗಡೆ ಎಂಬುವವರಿಂದ 3 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ. ಲೀಸ್ ಗೆ ಪಡೆದ ಜಾಗದ ವಿಚಾರವಾಗಿ ನಗರಸಭೆ ಸದಸ್ಯ ಗಣಪತಿ ನಾಯ್ಕ್ ಹಾಗೂ ಅಧಿಕಾರಿ ವರ್ಣೇಕರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಇಂದು ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.