Latest

*ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್, ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದ ಕಿನ್ನಿಗೋಳಿ ಪಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

2022-23ನೇ ಸಾಲಿನ ಐದನೇ ಹಣಕಾಸು ಯೋಜನೆಯಲ್ಲಿ ಕಿನ್ನೊಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್.ಡಿ.ಕೋಡಿ ಸರ್ಕಾರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಕೆಲಸ ನಿರ್ವಹಿಸಿದ್ದರು. 9,77,154 ರೂಪಾಯಿ ಮೊತ್ತದ ಬಿಲ್ ಮಂಜೂರಾತಿಗಾಗಿ ಕಿನ್ನಿಗೋಳಿ ಪತ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ನಗರಾಜ್ ಬಳಿ PWD ಕ್ಲಾಸ್ 1 ಗುತ್ತಿಗೆದಾರರು ತೆರಳಿದ್ದರು. ಈ ವೇಳೆ ಬಿಲ್ ಮಂಜೂರು ಮಾಡಲು ತನಗೆ 37 ಸಾವಿರ ರೂಪಯೈ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ 15 ಸಾವಿರ ರೂಪಾಯಿ ಲಂಚ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದೀಗ ಇಂಜಿನಿಯರ್ ನಾಗರಾಜು 7 ಸಾವಿರ ರೂಪಾಯಿ ಮುಂಗಡ ಹಣ ಪಡೆಯುತ್ತಿದ್ದಾಗ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಂಚಕ್ಕೆ ಕೈಯೊಡ್ಡಿದ್ದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button