Belagavi NewsBelgaum NewsCrimeKannada NewsKarnataka NewsNational

*ಬೆಳಗಾವಿಯಲ್ಲಿ ಲೋಕಾಯುಕ್ತ ಬಲೆ: BEO ಕಚೇರಿ ಅಧೀಕ್ಷಕ ಅರೆಸ್ಟ್*

ಗಳಿಕೆ ರಜೆಗಳ ನಗದೀಕರಣಕ್ಕೆ ₹5 ಸಾವಿರ ಲಂಚಕ್ಕೆ ಬೇಡಿಕೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧೀಕ್ಷಕ ಲೋಕಾಯುಕ್ತ ಬಲೆಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:: ನಿವೃತ್ತ ಮುಖ್ಯ ಶಿಕ್ಷಕರೊಬ್ಬರ ಗಳಿಕೆ ರಜೆಗಳ ನಗದೀಕರಣ ಮಾಡಿಕೊಡಲು ₹5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕಚೇರಿ ಅಧೀಕ್ಷಕರ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸವದತ್ತಿ ಪಟ್ಟಣದ ಪದಕಿಪುರಂ ನಗರದ ನಿವಾಸಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಶ್ರೀಶೈಲ ಬಸಪ್ಪ ಬೆಟ್ಟದ ಅವರಿಗೆ ನಿವೃತ್ತಿಯ ಬಳಿಕ ಕಾನೂನುಬದ್ಧವಾಗಿ ಸಿಗಬೇಕಿದ್ದ 300 ದಿನಗಳ ಗಳಿಕೆ ರಜೆಗಳ ನಗದೀಕರಣ ಮಾಡಿಕೊಡಲು ವಿಠಲ ರಾವಳ ₹5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ನಿವೃತ್ತ ಮುಖ್ಯ ಶಿಕ್ಷಕ ಶ್ರೀಶೈಲ ಬಸಪ್ಪ ಬೆಟ್ಟದ ಅವರು, ನಿವೃತ್ತಿಯ ನಂತರ ಸರ್ಕಾರದಿಂದ ಬರಬೇಕಿದ್ದ 300 ದಿನಗಳ ಗಳಿಕೆ ರಜೆಗಳ ನಗದೀಕರಣದ ಮೊತ್ತವನ್ನು ಮಂಜೂರು ಮಾಡಿಸಿಕೊಳ್ಳಲು ಪ್ರಯತ್ನಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧೀಕ್ಷಕ ವಿಠಲ ರಾವಳ ₹5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ವಿಠಲ ರಾವಳ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟ ಕಚೇರಿ ಅಧೀಕ್ಷಕ. ಈ ಕುರಿತು ದೂರುದಾರರು ಅ.27ರಂದು ಬೆಳಗಾವಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ಸಂಖ್ಯೆ 10/2026ರಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ತಿದ್ದುಪಡಿ ಕಲಂ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸ್ ಅಧೀಕ್ಷಕ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು. ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ವೆಂಕಟೇಶ ಯಡಹಳ್ಳಿ, ಜಿ.ಎಸ್. ಪಾಟೀಲ ಹಾಗೂ ಎಸ್.ಎಚ್. ಹೊಸಮನಿ ಸೇರಿದಂತೆ ಸಿಬ್ಬಂದಿ ತಂಡ ದಾಳಿ ನಡೆಸಿ, ಲಂಚದ ಹಣ ಸ್ವೀಕರಿಸುವ ವೇಳೆ ಕಚೇರಿ ಅಧೀಕ್ಷಕ ವಿಠಲ ರಾವಳ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದೆ.

ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button