
ಪ್ರಗತಿವಾಹಿನಿ ಸುದ್ದಿ, ಮಂಡ್ಯ: ಕೆಲಸ ಮಾಡಿಕೊಡಲು 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಾಂಡವಪುರ ತಹಸೀಲ್ದಾರ್ ಸೌಮ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ವಿಎ ಮರಿಸ್ವಾಮಿ ಎಂಬುವವರನ್ನು ಗುಮ್ಮನಹಳ್ಳಿಯಿಂದ ದೊಡ್ಡಮ್ಮನಹಳ್ಳಿಗೆ ವರ್ಗಾವಣೆ ಮಾಡಲು ಸೌಮ್ಯ ಅವರು 40 ಸಾವಿರ ರೂ. ಲಂಚ ಪಡೆಯುತ್ತಿದ್ದರು. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಮರಿಸ್ವಾಮಿ ಅವರು ಮೊದಲೇ ಲೋಕಾಯುಕ್ತಕ್ಕೆ ಮಾಹಿತಿ ನೀಡಿದ್ದರು.
ಸೌಮ್ಯ ಅವರು ಗುರುವಾರ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ನಿರೀಕ್ಷಕ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಸೌಮ್ಯ ಅವರನ್ನು ವಶಕ್ಕೆ ಪಡೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ