ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಲೋಕಾಯುಕ್ತದಲ್ಲಿ ದೂರು ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಆರ್.ರಮೇಶ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಸಾಲದ ರೂಪದಲ್ಲಿ 1.30 ಕೋಟಿ ಕಿಕ್ ಬ್ಯಾಕ್ ಪಡೆದುಕೊಂಡಿದ್ದಾರೆ. ಅದನ್ನು ಸಾಲ ಪಡೆದಿದ್ದಾಗಿ ಸುಳ್ಳು ಹೇಳುತ್ತಿದ್ದಾರೆ. ನಾಲ್ಕು ವರ್ಷದ ಬಳಿಕ ಸಾಲದ ಹಣ ವಾಪಸ್ ಕೊಡದಿದ್ದರೆ ಕೇಳಲು ಹಕ್ಕಿಲ್ಲ ಹೀಗಾಗಿ ಕೋಟ್ಯಂತರ ರೂಪಿಯಿ ಹಣ ಪಡೆದು ಸಾಲ ಎಂದು ಸಮಜಾಯಿಶಿ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದೇನೆ. ಕಿಂಗ್ಸ್ ಕೋರ್ಟ್ ನ ಎಲ್ ವಿವೇಕಾನಂದ ಅವರಿಂದ 1.30 ಕೋಟಿ ರೂಪಾಯಿ ಚೆಕ್ ರೂಪದಲ್ಲಿ ಸಿದ್ದರಾಮಯ್ಯ ಹಣ ಪಡೆದ ಬಗ್ಗೆ ಆನಂತರದಲ್ಲಿ ಅವರನ್ನು ಟರ್ಫ್ ಕ್ಲಬ್ ಉಸ್ತುವಾರಿಯಾಗಿ ನೇಮಕ ಮಾಡಿರುವ ಬಗ್ಗೆ ದಾಖಲೆಗಳನ್ನು ಸಲ್ಲಿಸಿದ್ದೇನೆ. ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮವಾಗುವುದು ನಿಶ್ಚಿತ ಎಂದು ಹೇಳಿದ್ದಾರೆ.
ಪತಿಯ ಬ್ಯಾನರ್ ಹರಿದು ಹಾಕಿ ಆಕ್ರೋಶ; ಬಿಜೆಪಿ ಮುಖಂಡನ ಪತ್ನಿಯಿಂದ ರಸ್ತೆಯಲ್ಲಿಯೇ ಗಲಾಟೆ
https://pragati.taskdun.com/latest/bidarbjp-leaderwifehusband-banner/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ