*ಲೋಕಾಯುಕ್ತ ಜನ ಸಂಪರ್ಕ ಸಭೆ; ಸಾರ್ವಜನಿಕರು ನೇರವಾಗಿ ದೂರು ನೀಡಬಹುದು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಸಭಾಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಮಾರ್ಚ.೧೩ ರಂದು ಬೆಳ್ಳಿಗ್ಗೆ ೧೧ ಗಂಟೆಯಿಂದ ೨ ಗಂಟೆಯವರೆಗೆ ಆಯೋಜಿಸಲಾಗಿದೆ.
ಸರ್ಕಾರಿ ಕಛೇರಿಯಲ್ಲಿನ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ ಹಾಗೂ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ/ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಬಹುದಾಗಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೋಲಿಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆಗಳಾದ (೧) ೦೮೩೧-೨೯೫೦೭೫೬ ಮತ್ತು (೨) ೦೮೩೧-೨೪೨೧೯೨೨ ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಆಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ