
ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಇಂದೇ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಗೆ ನೋಟಿಸ್ ನೀಡಿದ್ದಾರೆ.
ಲೋಕಾಯುಕ ನೋಟಿಸ್ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸಂಪುಟ ಸಭೆ ಬಳಿಕ ವಿಚಾರಣೆಗೆ ಹಾಜರಾಗಲಿದ್ದಾರೆ.
ಅಕ್ರಮ ಹಣ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.




