
ಲೋಕಾಯುಕ್ತ ಎಂಬುದೀಗ ಕಾಂಗ್ರೆಸ್ಸಾಯುಕ್ತ ಆಗಿದೆ
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಾಯುಕ್ತ ತನಿಖಾ ಸಂಸ್ಥೆ ಸಿಎಂ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಸಂಪೂರ್ಣ ಶರಣಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಲೋಕಾಯುಕ್ತ ಹಿಂದಿನಂತೆ ಖಡಕ್ ತನಿಖಾ ಸಂಸ್ಥೆಯಾಗಿ ಉಳಿದಿಲ್ಲ. ಬದಲಿಗೆ ಕಾಂಗ್ರೆಸ್ ಆಯುಕ್ತವಾಗಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು.
ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬಕ್ಕೆ ಅನುಕೂಲಕರ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಸಚಿವ ಜೋಶಿ ಆರೋಪಿಸಿದರು.
30 ಲಕ್ಷ ರೂಪಾಯಿ ಎಣಿಸುವ ವಿಡಿಯೋ ಸಮೇತ ಸುದ್ದಿ ಮಾದ್ಯಮವೊಂದರಲ್ಲಿ ಬಿತ್ತರವಾಗಿದೆ. ಇಷ್ಟೊಂದು ದೊಡ್ಡ ಪ್ರಕರಣ ನಡೆದರೂ ಇದುವರೆಗೆ ಯಾರೊಬ್ಬರನ್ನೂ ಬಂಧಿಸಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಹೈಕಮಾಂಡ್ ಸಿಎಂ ಕೈ ಹಿಡಿದಿದೆ: ವಾಲ್ಮೀಕಿ, ಮೂಡಾ ಹೀಗೆ ಸಾಕಷ್ಟು ಹಗರಣ ನಡೆದರೂ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಕೈ ಹಿಡಿದಿದೆ ಎಂದು ಟೀಕಿಸಿದರು.
ಸಿಎಂ ಕೆಳಗಿಳಿಸಲು ನಿರ್ಧಾರ: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ತೀರ್ಮಾನ ಮಾಡಿದಂತಿದೆ. ಆದರೆ, ಮುಂದಿನ ಸಿಎಂ ಡಿಕೆ ಶಿವಕುಮಾರ್ ಆಗುತ್ತಾರೋ ಅಥವಾ ಮತ್ಯಾರಾಗುತ್ತಾರೆ ಎಂಬುದನ್ನು ಈ ಉಪಚುನಾವಣೆ ನಿರ್ಧರಿಸಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ