Latest

ಕಳೆದ 24 ಗಂಟೆಗಳಲ್ಲಿ 47,704 ಜನರಲ್ಲಿ ಕೊವಿಡ್ ಪಾಸಿಟೀವ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೋನಾ ಸೋಂಕು ದೇಶದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ ಒಂದೇ ದಿನ 654 ಮಂದಿ ಬಲಿಯಾಗಿದ್ದು, ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 33,425 ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಇನ್ನು 14,83,157 ಮಂದಿ ಸೋಂಕಿತರ ಪೈಕಿ 9,52,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,96,988 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

 

Home add -Advt

Related Articles

Back to top button