*ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದ ಬೆಳಗಾವಿ ತಾಲೂಕು ಪಂಚಾಯಿತಿ ಇಒ, ಕಾರ್ಯದರ್ಶಿ*
ಪ್ರಗತಿವಾಹಿನಿ ಸುದ್ದಿ: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ರಾಮರೆಡ್ಡಿ ಪಾಟೀಲ್ ಹಾಗೂ ಗ್ರೇಡ್ 2 ಕಾರ್ಯದರ್ಶಿ ವೈಜನಾಥ ಸನದಿ ಬಂಧಿತರು.
ಕಾಕತಿವೇಸ್ ಪ್ರದೇಶದ ನಿವಾಸಿ ಶಾನವಾಜ್ ಖಾನ್ ಪಠಾಣ ಅವರು ವಾಣಿಜ್ಯ ಉದ್ದೇಶಕ್ಕಾಗಿ ತಮ್ಮ ನಿವಾಸವನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಭೂ ಪರಿವರ್ತನೆ ಮಾಡಿಕೊಡಲು ರಾಮರೆಡ್ಡಿ ಪಾಟೀಲ್ 40 ಸಾವಿರ ಲಂಚ ಕೇಳಿದ್ದರು. ಲಂಚದ ಹಣ ಪಡೆಯುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಅನ್ನಪೂರ್ಣ ಹುಲಗೂರು ನೇತೃತ್ವದಲ್ಲಿ ದಾಳಿ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ.
ಅಲ್ಲದೇ ಇಬ್ಬರ ಮನೆಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ