Kannada NewsKarnataka NewsLatest

*ಭ್ರಷ್ಟ ಅಧಿಕಾರಿಗಳಿಗೆ ಶಾಕ್; ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕರಿಗಳಿ ದಾಳಿ ನಡೆಸಿದ್ದು, ಭ್ರಷ್ಟರ ನಿದ್ದೆಗೆಡಿಸಿದ್ದಾರೆ.

ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿಗಳಿಗೆ ಆರೋಪದಡಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಚಿತ್ರದುರ್ಗದ ಹೊಳಲ್ಕೆರೆಯ ಸಣ್ಣನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ ಬಿಬಿಎಂಪಿ ಎಇ ಹೆಚ್ ಭಾರತಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಎಸ್ ಪಿ ವಾಸುದೇವರಾವ್ , ಡಿವೈಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾವಣಗೆರೆ ಜಯನಗರದಲ್ಲಿರುವ ಮಹೇಶ್ ಮನ್ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button