Kannada NewsKarnataka NewsLatest

*ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್*

ಪ್ರಗತಿವಾಹಿನಿ ಸುದ್ದಿ: ಆದಾಯಕ್ಕೂ ಮೀರಿದ ಆಸ್ತಿ ಗಳಿಸಿರುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.

ಚಿತ್ರದುರ್ಗ, ಶಿವಮೊಗ್ಗ, ಶಿಕಾರಿಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿಸ್ದಾರೆ. ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುಶೀಲಮ್ಮ ವರ್ಷದ ಹಿಂದೆ ವಿಆರ್ ಎಸ್ ಪಡೆದಿದ್ದರು. ಆದರೆ ಅವರು ಅಕೌಂಟೆಂಟ್ ಆಗಿದ್ದ ವೇಳೆ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಲೋಕಾಯುಲ್ಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೋಭಾ ಅವರ ಮನೆ, ಶಿಕಾರಿಪುರ ಹಾಗೂ ಸಾಗರದಲ್ಲಿರುವ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ. ಅವರ ಮ್ಯಾನೇಜರ್ ರಾಘವೇಂದ್ರ ಅವರ ಶಿಕಾರಿಪುರ ಮನೆ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Home add -Advt

ಬಳ್ಳಾರಿಯ ಮೀನುಗಾರಿಕಾ ಇಲಾಖೆ ಅಧಿಕಾರಿ ಮನೆ., ಕಚೇರಿ ಮೇಲೂ ದಾಳಿ ನಡೆದಿದೆ

Related Articles

Back to top button