ಪ್ರಗತಿವಾಹಿನಿ ಸುದ್ದಿ; ಹಾವೇರಿ: ಲಂಚ ಪಡೆಯುತ್ತಿದ್ದ ವೇಳೆ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆಯ ಉಪನಿರ್ದೇಶಕ ಹಾಗೂ ದ್ವಿತಿಯ ದರ್ಜೆ ಸಹಾಯಕ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಡಿಡಿಪಿಐ ಅಂದಾನಪ್ಪ ವಡಗೇರಿ ಹಾಗೂ ಎಸ್ ಡಿಎ ದತ್ತಾತ್ರೇಯ ಕುಂಟಿ ಲೋಕಾಯುಕ್ತ ಬಲೆಗೆ ಬಿದ್ದವರು. ಇಬ್ಬರೂ ನಿವೃತ್ತ ಶಿಕ್ಷಕ ಮೊಹಮ್ಮದ್ ಗೌಸ್ ಎಂಬುವವರಿಂದ ಲಂಚ ಪಡೆಯುತ್ತಿದ್ದರು. ನಿವೃತ್ತಿ ವೇತನ ಸೌಲಭ್ಯಕ್ಕಾಗಿ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ರವಾನಿಸಲು 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಡಿವೈ ಎಸ್ ಪಿ ಚಂದ್ರಶೇಖರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ