Kannada NewsKarnataka NewsLatest
*ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ*

ಪ್ರಗತಿವಾಹಿನಿ ಸುದ್ದಿ: ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಲೇಜ್ ಅಕೌಂಟೆಂಟ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಫಕಿರೇಶ್ ಬಾರ್ಕಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. 8,500 ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ವಿಲೇಜ್ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹಾವೇರಿ ತಾಲೂಕಿನ ನೆಗಳೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಫಕಿರೇಶ್ ಬಾರ್ಕಿ ಬಸಾಪುರ ಗ್ರಾಮದ ರೈತ ಕರಿಯಪ್ಪ ಕೆಸರಳ್ಳಿ ಎಂಬುವವರ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು 63,000 ರೂಪಾಯಿಗೆ ಬೇಡಿಕೆ ಇಟ್ಟಿದ್ದರು. 30 ಸಾವಿರ ರೂಪಾಯಿ ಹಣವನ್ನು ಮೊದಲೇ ಪಡೆದುಕೊಂಡಿದ್ದರು. ಇಂದು 8,500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.



