ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮುಕ್ಕಲಪ್ಪ ನೀಲಜೇರಿ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್. ಸಂಜನಾ ಬೀರಪ್ಪ ಎಂಬುವವರಿಂದ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ಮುಕ್ಕಲಪ್ಪ ನೀಲಜೇರಿಯನ್ನು ಬಂಧಿಸಿದ್ದಾರೆ.
ದೂರುದಾರರ ಹೆಸರು ಕೈಬಿಡಲು ಪಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಧ್ಯ ಕಾನ್ಸ್ ಟೇಬಲ್ ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ