
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಬಾಗಲಕೋಟೆ, ವಿಜಯಪುರ, ಧಾರವಾಡ, ಕೋಲಾರ, ಮಂಡ್ಯ ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.
ಬಿಡದಿಯ ಮಂಚನಾಯಕನಹಳ್ಳಿ ಗ್ರಾಮಪಂಚಾಯಿತಿ ಪಿಡಿಓ ಯತೀಶ್ ಚಂದ್ರ, ಬಿಬಿಎಂಪಿ ಚೀಫ್ ಇಂಜಿನಿಯರ್ ರಂಗನಾಥ್, ಕಾರವಾರದ ನಗರಾಭಿವೃದ್ಧಿ ಪ್ರಾಧಿಕರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಆರ್.ರೇವಣಕರ್, ಬಾಗಲಕೋಟೆಯ ಆರ್ ಟಿ ಓ ಅಧಿಕಾರಿ ಷಣ್ಮುಗಪ್ಪ ತೀರ್ಥ ಅವರ ವ್ವಿಜಯಪುರದ ಮನೆ ಸೇರಿದಂತೆ ಹಲವೆಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ