ಪ್ರಗತಿವಾಹಿನಿ ಸುದ್ದಿ: ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು, ಮಂಡ್ಯ ಸೇರಿದಂತೆ 7 ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು, ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಮುಂದುವರೆಸಿದ್ದಾರೆ.
ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂ.ಸಿ ಕೃಷ್ಣವೇಣಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕೃಷ್ಣವೇಣಿ ಮಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ಅಲ್ಲಿಯೂ ದಾಳಿ ನಡೆದಿದೆ.
ಬೆಂಗಳೂರಿನ ಟೌನ್ ಪ್ಲಾನಿಂಗ್ ಮತ್ತು ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ ನದೆದಿದೆ. ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿ ಎಸ್ ಪಿ ಮೋಹನ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ
ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ