Karnataka News

*ಆರೋಗ್ಯಾಧಿಕಾರಿ, ಬೆಸ್ಕಾಂ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು, ಬಿಬಿಎಂಪಿ ವಸಂತಪುರ ವಾರ್ಡ್ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Home add -Advt

ಬೆಂಗಳೂರು ಗ್ರಾಮಾಂತರ ಆರೋಗ್ಯಾಧಿಕಾರಿ ಎಂ.ಸಿ.ಸುನೀಲ್ ಕುಮಾರ್ ಅವರ ಮನೆ, ಕಲಬುರಗಿ ಪಾಲಿಕೆ ಉಪ ಆಯುಕ್ತರ ನಿವಾಸದ ಮೇಲೂ ದಾಳಿ ನಡೆದಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಗದಗ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button