
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿಗಳಿಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ವಿವಿಧೆಡೆ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ 12 ಕಡೆ ಏಕಕಾಲಕ್ಕೆ ದಾಳಿ ನಡೆದಿದೆ.
ತುಮಕೂರಿನ 7, ಬೆಂಗಳೂರು ಗ್ರಾಮಾಂತರದ 8, ಯಾದಗಿರಿ 5, ಮಂಗಳೂರಿನ 4 ಹಾಗೂ ವಿಜಯಪುರದ 4 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.