Kannada NewsKarnataka NewsLatest

*BREAKING: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI*

ಪ್ರಗತಿವಾಹಿನಿ ಸುದ್ದಿ: 30 ಸಾವಿರ ಹಣ ಸ್ವೀಕರಿಸುತ್ತಿದ್ದ ವೇಳೆ ಪ್ರಭಾರ ಆರ್ ಐ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ಕಸಬಾ ಹೋಬಳಿಯ ಪ್ರಭಾರ ಕಂದಾಯ ನಿರೀಕ್ಷಕ (RI) ನಾಗೇಶ್ ಲೋಕಾಯುಕ್ತ ಬಲೆಫ಼ೆ ಬಿದ್ದವರು. ಜಮೀನಿನ ಪೌತಿ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರ್ ಐ ನನ್ನು ಬಂಧಿಸಿದ್ದಾರೆ.

ಮೂಲತಃ ಗ್ರಾಮಾಡಳಿತಾಧಿಕಾರಿಯಾಗಿದ್ದ (VA) ನಾಗೇಶ್ ಅವರು ಮಧುಗಿರಿ ಕಸಬಾ ಹೋಬಳಿಯ ಪ್ರಭಾರ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ 30 ಸಾವಿರ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button