Kannada NewsKarnataka NewsLatest

*1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PWD ಇಲಾಖೆ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ವಿಜಯನಗರದಲ್ಲಿ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ಇಂದು ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿಯೇ ಈ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button