Kannada NewsKarnataka NewsLatest
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಲೈಸನ್ಸ್ ಸರ್ವೇಯರ್*

ಪ್ರಗತಿವಾಹಿನಿ ಸುದ್ದಿ: ಜಮೀನು ಮಾಲೀಕನಿಂದ 2500 ರೂಪಾಯಿ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಪರವಾನಿಗೆ ಭೂ ಮಾಪಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಚಂದ್ರಮೋಹನ್ ಲೋಕಾಯುಕ್ತ ಬಲೆಗೆ ಬಿದ್ದ ಲೈಸನ್ಸ್ ಸರ್ವೇಯರ್. ಯಲ್ಲಾಪುರದ ರವೀಂದ್ರ ನಗರದ ಧೀರಜ್ ವಿಠಲ ಎಂಬುವವರಿಂದ 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಂದ್ರಮೋಹನ್ ರನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ ಪಿ ಕುಮಾರ್ ಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಕಾರವಾರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



