
ಪ್ರಗತಿವಾಹಿನಿ ಸುದ್ದಿ: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮೃತಪಟ್ಟ ಘಟನೆ ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್‌ನ ಅಂಧೇರಿ ವೆಸ್ಟ್‌ನಲ್ಲಿ ನಡೆದಿದೆ.
ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಈ ಬಗ್ಗೆ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮಾಹಿತಿ ನೀಡಿದೆ. ಬೆಂಕಿ ದೊಡ್ಡದಾಗಿ ಕಾಣಿಸಿಕೊಂಡಿಲ್ಲ. ಆದರೂ ಕಟ್ಟಡ 10ನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ಬೆಂಕಿ ಆವರಿಸಿತ್ತು.
ಘಟನೆಯಲ್ಲಿ ಗಾಯಗೊಂಡ ಇಬ್ಬರು ಹಿರಿಯ ನಾಗರಿಕರು ಸೇರಿದಂತೆ ಮೂವರು ನಿವಾಸಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಾಯಾಳುಗಳು ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಘಟನೆಯ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ 1 ಗಂಟೆಯಲ್ಲಿ ಬೆಂಕಿ ನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ