ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಓಂ ಬಿರ್ಲಾ, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ಬೇಸರ ತಂದಿದೆ. ಸದನದಲ್ಲಿ ನಡೆದ ಘಟನೆಯಿಂದ ಪ್ರಜಾಪ್ರಭುತ್ವದ ಘನತೆಗೆ ಧಕ್ಕೆಯಾಗಿದೆ. ಧರ್ಮೇಗೌಡರ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳ ಸಮಗ್ರತೆ ಹಾಗೂ ಸಭಾಪತಿಗಳ ಘನತೆ ಮತ್ತು ಸ್ವಾತಂತ್ರ್ಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ