*6 ತಿಂಗಳಲ್ಲೇ ಲೋಳಸೂರು ನೂತನ ಸೇತುವೆ ಕಾಮಗಾರಿ ಪ್ರಾರಂಭ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಇತ್ತಿಚೀಗೆ ಅತಿವೃಷ್ಟಿಯಿಂದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯ ಸ್ಥಿತಿಗತಿಯನ್ನು ಪರಿಶೀಲಿಸಿ, ಹೊಸ ಸೇತುವೆ ನಿರ್ಮಾಣದ ಕುರಿತು ಲೋಕೋಪಯೋಗಿ ಅಧಿಕಾರೊಗಳೊಂದಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚರ್ಚೆ ನಡೆಸಿದರು.
ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪಣ ತೊಟ್ಟಿದ್ದು, ಲೋಳಸೂರ ಸೇತುವೆ ಪ್ರವಾಹ ಬಂದಾಗೊಮ್ಮೆ ಮುಳುಗಡೆ ಆಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೂ ಪದೇ ಪದೇ ತೊಂದರೆ ಉಂಟಾಗುತ್ತಿರುವುದರಿಂದ ಹೊಸ ಸೇತುವೆ ನಿರ್ಮಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಂದಾಗಿದ್ದಾರೆ.
ನೂತನ ಸೇತುವೆಯ ನೀಲನಕ್ಷೆ ವೀಕ್ಷಿಸಿ, ಅಧಿಕಾರಿಗಳಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡಿ ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ. ನೂತನ ಸೇತುವೆ ನಿರ್ಮಾಣಕ್ಕೆ ಸರ್ಕಾದಿಂದ ಈಗಾಗಲೇ ಅಂದಾಜು 40 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ಆರು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ