Kannada NewsKarnataka NewsNational

*ಲೋನಾವಾಲಾ ದುರಂತ: ನೀರಿನಲ್ಲಿ ಕೊಚ್ಚಿಹೊಗಿದ್ದ ಐವರ ಮೃತದೇಹಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ಲೋನಾವಾಲಾದ ಭೂಶಿ ಅಣೆಕಟ್ಟಿನ ಬಳಿ ಭಾನುವಾರ ಮಧ್ಯಾಹ್ನ ನಾಲ್ಕು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ಇದರ ವಿಡಿಯೋ ವೈರಲ್‌ ಆಗಿದ್ದು, ಎಲ್ಲರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ಸ್ಥಳಿಯ ಪೊಲೀಸರು ಹಾಗೂ ರಕ್ಷಣಾ ದಳದ ಸಿಬ್ಬಂದಿಗಳು ನಿರಂತರ ಎರಡು ದಿನಗಳ ರಕ್ಷಣಾ ಕಾರ್ಯ ನಡೆಸಿ ಮಹಿಳೆ, ಮಗು ಸೇರಿ 5 ಮಂದಿಯ ಶವ ಹೊರ ತೆಗೆದಿದ್ದಾರೆ. ಮಹಾರಾಷ್ಟ್ರದ ಲೋನಾವಾಲಾ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆಯಾಗಿದೆ. ಹೀಗಾಗಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ಮೃತರನ್ನು ಸಾಹಿಸ್ತಾ ಲಿಯಾಕತ್ ಅನ್ಸಾರಿ (36), ಅಮಿಮಾ ಆದಿಲ್ ಅನ್ಸಾರಿ (13), ಉಮೇರಾ ಅಲಿಯಾಸ್ ಸಲ್ಮಾನ್ ಆದಿಲ್ ಅನ್ಸಾರಿ (8) ಅದ್ನಾನ್ ಶಬತ್ ಅನ್ಸಾರಿ (4) ಮತ್ತು ಮರಿಯಾ ಅನ್ಸಾರಿ (9) ಎಂದು ಗುರುತಿಸಲಾಗಿದೆ. 

Home add -Advt

Related Articles

Back to top button