Cancer Hospital 2
Bottom Add. 3

*ಲಾರಿ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರ ದೆಹ ಛಿದ್ರ ಛಿದ್ರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾರಾಯಣ ಹೃದಯಾಲಯದ ಮುಂಭಾಗ ಸಂಭವಿಸಿದೆ.

ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಮಹಿಳೆಯರಿಬ್ಬರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಹಿಳೆಯರ ದೇಹ ಛಿದ್ರ ಛಿದ್ರವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವೈಟ್ ಫೀಲ್ಡ್ ನಿಂದ ಬಂದಿದ್ದ ಇಬ್ಬರು ಮಹಿಳೆಯರು ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Bottom Add3
Bottom Ad 2

You cannot copy content of this page