Kannada NewsKarnataka NewsLatest

*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (21) ಹಾಗೂ ಸಹನಾ (31) ಮೃತರು.

ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button