Kannada NewsKarnataka NewsLatest

*ಟಿಪ್ಪರ್ ಲಾರಿ- ಬೈಕ್ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪಂಪ್ ವೆಲ್ ನಲ್ಲಿ ಈ ದುರಂತ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಗೋಪಾಲ್ (29) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್ ವೆಲ್ ಸರ್ವಿಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆಬ್ ನಡೆಸಿದ್ದಾರೆ.

Home add -Advt

Related Articles

Back to top button