Kannada NewsKarnataka NewsLatest

*ಬಸ್ ಹಾಗೂ ಲಾರಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಇಲ್ಲಿನ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಈ ಅಪಘಾತ ನಡೆದಿದೆ. ಬಸ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ಹಾಗೂ ಲಾರಿ ಎರಡೂ ಕೇರಳ ಮೂಲದ್ದಾಗಿವೆ. ಗಾಯಾಳುಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button