*ಬಸ್ ಹಾಗೂ ಲಾರಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಈ ಅಪಘಾತ ನಡೆದಿದೆ. ಬಸ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಹಾಗೂ ಲಾರಿ ಎರಡೂ ಕೇರಳ ಮೂಲದ್ದಾಗಿವೆ. ಗಾಯಾಳುಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. Home add -Advt *BREAKING: … Continue reading *ಬಸ್ ಹಾಗೂ ಲಾರಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed