Kannada NewsKarnataka NewsLatest

*ಲಾರಿ-ಕಾರು ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಗದಗದಿಂದ ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಕುಟುಂಬವೊಂದು ಕಾರಿನಲ್ಲಿ ಬರುತ್ತಿತ್ತು. ಈ ವೇಳೆ ಲಾರಿ ಡಿಕ್ಕಿಯಾಗಿದೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಶಿವಲಿಂಗಗೌಡ (60) ಹಾಗೂ ಪ್ರಮಳಿ (55) ಮೃತ ದುರ್ದೌವಿಗಳು. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button