Kannada NewsKarnataka NewsLatest

*ಲಾರಿ-ಕಾರು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಗೊಬ್ಬರ ತುಂಬಿದ್ದ ಲಾರಿ ಹಾಗೂ ಆಲ್ಟೋ ಕಾರಿನ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಛಿದ್ರ ಛಿದ್ರಗೊಂಡಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಮಂಡ್ಯ ಮೂಲದವರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button