
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಕಾರಿನ ನಡುವೆ ಸಂಭವಿದ ಅಪಘಾತದಲ್ಲಿ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಘಟನೆಯಲ್ಲಿ ತಾಯಿ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ.
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದರು. ಅಪಘಾತದ ಭೀಕರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಧಗ ಧಗಿಸಿ ಉರಿದಿದೆ. ಕಾರಿನಲ್ಲಿದ್ದ ತಾಯಿ ಹಾಗೂ ಮಗು ಸಜೀವ ದಹನವಾಗಿದ್ದಾರೆ. ಪತಿ ಹಾಗೂ ಇನ್ನೋರ್ವ ಮಗಳ ಕಣ್ಮುಂದೆಯೇ ಈ ಘಟನೆ ನಡೆದಿದೆ.
ತಾಯಿ ಸಿಂಧು ಹಾಗೂ 2 ವರ್ಷದ ಮಗಳು ಮೃತರು. ತಂದೆ ಮಹೇಂದ್ರ ಹಾಗೂ ಇನ್ನೋರ್ವ ಮಗಳಿಗೆ ಗಂಭೀರ ಗಾಯಗಲಾಗಿದ್ದು, ಉತರಹಳ್ಳಿ ಬಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ನಿದ್ರೆ ಮಂಪರಿನಲ್ಲಿದ್ದುದರಿಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ