Belagavi NewsBelgaum News

*ಬೆಳಗಾವಿಯಲ್ಲಿ ಸಕ್ಕರೆ ತುಂಬಿದ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೆ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಕ್ಕರೆ ತುಂಬಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ.

ಸಕ್ಕರೆ ತುಂಬಿದ್ದ ಲಾರಿ ರಾಮದುರ್ಗದ ಮುದಕವಿ ಗುಡ್ಡದ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದಿದೆ. ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೂ ಮೂವರಿಗೆ ಗಂಭೀರವಾದ ಗಾಯಗಳಾಗಿವೆ.

ಮೃತರನ್ನು ಬಾಲಪ್ಪ ಮುದಕವಿ, ಯಲ್ಲವ್ವ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button